ನವೆಂಬರ್ 29ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿಗೆ ಭೇಟಿ

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 29ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಬೆಳಿಗ್ಗೆ 8 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ ಬೆಳಿಗ್ಗೆ 10.45ಕ್ಕೆ ಉಡುಪಿಗೆ ಆಗಮಿಸುವರು. ಬಳಿಕ ಬೆಳಿಗ್ಗೆ 11ಗಂಟೆಗೆ ಉಡುಪಿ ಮಿಷನ್ ಆಸ್ಪತ್ರೆ ಬಳಿಯ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ.

ಆ ಬಳಿಕ ಮಧ್ಯಾಹ್ನ 2 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ಮುಂಚೂಣಿ ಘಟಕಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.