ಲಖನೌ: ಲವ್ ಜಿಹಾದ್ ತಡೆಗೆ ಉತ್ತರ ಪ್ರದೇಶ ಸರ್ಕಾರ ರೂಪಿಸಿದ ‘ಕಾನೂನು ಬಾಹಿರ ಧಾರ್ಮಿಕ ಮತಾಂತರದ ನಿಷೇಧ 2020’ ಸುಗ್ರೀವಾಜ್ಞೆಗೆ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅಂಕಿತ ಹಾಕಿದ್ದಾರೆ.
ವಿವಾಹಕ್ಕಾಗಿ ಬಲವಂತದ ಧಾರ್ಮಿಕ ಮತಾಂತರವನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನು ರೂಪಿಸಿ, ಉತ್ತರ ಪ್ರದೇಶ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಲು ಮಂಗಳವಾರ ಒಪ್ಪಿಗೆ ಸೂಚಿಸಿತ್ತು. ಸರ್ಕಾರದ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ.
ಇನ್ಮುಂದೆ ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ಸೇರಿದಂತೆ ಬಲವಂತದ ಮತಾಂತರವು ಕಾನೂನುಬಾಹಿರ, ಶಿಕ್ಷಾರ್ಹ ಅಪರಾಧ ಆಗಲಿದೆ. ಈ ಕಾನೂನು ಉಲ್ಲಂಘಿಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.