ಕೋಟ: ಸ್ಕೂಟಿಗೆ ಕಾರು ಡಿಕ್ಕಿ; ಯುವತಿ ಮೃತ್ಯು

ಕೋಟ: ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಕೋಟ ರಾಷ್ಟ್ರೀಯ ಹೆದ್ದಾರಿಯ ಕೃಷ್ಣಭವನ ಹೋಟೆಲ್ ಬಳಿ ಶನಿವಾರ ಸಂಭವಿಸಿದೆ.

ಮೃತಳನ್ನು ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಎಂದು ಗುರುತಿಸಲಾಗಿದೆ. ಆಕೆಯ ಸ್ನೇಹಿತೆ ಕುಂದಾಪುರ ಕೋಡಿಯ ಪ್ರಜ್ಞಾ (25) ಗಂಭೀರ ಗಾಯಗೊಂಡಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿದುಬಂದಿದೆ.

ಇವರಿಬ್ಬರು ಕುಂದಾಪುರದಿಂದ ಉಡುಪಿ ಕಡೆಗೆ ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದಾರೂ ಶ್ರೇಯಾ ಚಿಕಿತ್ಸೆ ಫಲಿಸದೆ ಉಡುಪಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನೆಯಿಂದ ತೀವ್ರವಾಗಿ ಗಾಯಗೊಂಡಿರುವ ಪ್ರಜ್ಞಾ ಮಣಿಪಾಲದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ ಎನ್ನಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.