ಜಿ.ಟಿ. ದೇವೇಗೌಡ ನಮ್ಮಿಂದ ಹಣ ಪಡೆದು ಬಿಜೆಪಿ ಪರ ಕೆಲಸ ಮಾಡಿದ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಕಾಂಗ್ರೆಸ್​​ ಹಿರಿಯ ನಾಯಕರ ಆತ್ಮಾವಲೋಕನ ಸಭೆಯಲ್ಲಿ ಜಿ.ಟಿ.ದೇವೇಗೌಡರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪವನ್ನು ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಉಂಟಾಗಿರುವ ಸೋಲಿನ ವಿಚಾರವನ್ನು ಪ್ರಸ್ತಾಪಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾವು ಲೋಕಸಭಾ ಚುನಾವಣೆಯಲ್ಲಿ 15 ಸೀಟ್ ಗೆಲ್ಲಬಹುದಾಗಿತ್ತು. ಆದರೆ ಮೈತ್ರಿ ಮಾಡಿಕೊಂಡು ನಾವು ಸೋಲಬೇಕಾಯಿತು ಎಂದಿದ್ದಾರೆ.

ಮಾತು ಮುಂದುವರಿದ ಅವರು, ಜಿಟಿ ದೇವೇಗೌಡ ನಮ್ಮಿಂದಲೇ ಹಣ ಪಡೆದು ಬಿಜೆಪಿ ಪರ ಕೆಲಸ ಮಾಡಿದ. ಜೆಡಿಎಸ್ ನವರಿಗೆ ನಮಗಿಂತ ಬಿಜೆಪಿ ಪರವೇ ಒಲವು ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.