ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಮುಡಿಗೇರಿಸಿಕೊಂಡಿದೆ.
ಮೊದಲ ಬ್ಯಾಟಿಂಗ್ ನಡೆಸಿದ 195 ರನ್ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಇನ್ನೆರಡು ಎಸೆತಗಳು ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಮೊದಲು ಬ್ಯಾಟಿಂಗ್ ಇಳಿದ ಆಸ್ಟ್ರೇಲಿಯಾ ಮ್ಯಾಥ್ಯು ವೇಡ್ 58, ಸ್ಮಿತ್ 46 ರನ್ ಗಳ ಉತ್ತಮ ಪ್ರದರ್ಶನದಿಂದ ಐದು ವಿಕೆಟ್ ನಷ್ಟಕ್ಕೆ 20 ಒವರ್ ಗಳಲ್ಲಿ 194 ರನ್ ಗಳನ್ನು ಪೇರಿಸಿತ್ತು. ಭಾರತ ಪರ ನಟರಾಜನ್ ಎರಡು, ಶಾರ್ದುಲ್ ಹಾಗೂ ಚಾಹಲ್ ತಲಾ ಒಂದು ವಿಕೆಟ್ ಕಬಳಿಸಿದರು.
ಬೃಹತ್ ಮೊತ್ತವನ್ನು ಬೆನ್ನಟ್ಟಿದ ಭಾರತ ಶಿಖರ್ ಧವನ್ 52, ನಾಯಕ ವಿರಾಟ್ ಕೊಯ್ಲಿ 40 ಹಾಗೂ ಹಾರ್ದಿಕ್ ಪಾಂಡ್ಯ ಅಜೇಯ 42 ರನ್ ಗಳ ಸ್ಫೋಟಕ ಬ್ಯಾಟಿಂಗ್ ಪ್ರದರ್ಶದಿಂದ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು. ಆ ಮೂಲಕ ಒಂದು ಪಂದ್ಯ ಬಾಕಿ ಇರುವಂತೆಯೇ ಮೂರು ಪಂದ್ಯಗಳ ಟಿ 20 ಸರಣಿಯನ್ನು ವಶಪಡಿಸಿಕೊಂಡಿತು.












