ಶಿಕ್ಷಣ ತಜ್ಞ, ಹಿರಿಯ ಪತ್ರಕರ್ತ ಕೆ. ದಾಮೋದರ ಐತಾಳ್ ನಿಧನ

ಉಡುಪಿ: ಶಿಕ್ಷಣ ತಜ್ಞ, ಹಿರಿಯ ಪತ್ರಕರ್ತ, ಬಳಕೆದಾರರ ವೇದಿಕೆಯ ವಿಶ್ವಸ್ಥ ಕೆ. ದಾಮೋದರ ಐತಾಳ್ ನಿಧನ (85) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು.

ಅನೇಕ ವರ್ಷಗಳ ಕಾಲ ನಾಡಿನ‌ ವಿವಿಧ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ , ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ಕನ್ನಡ ಪ್ರಭ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ, ಹೊಸದಿಗಂತ ಪತ್ರಿಕೆಯಲ್ಲಿ ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದರು. ಉಡುಪಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಉಡುಪಿ ಬಳಕೆದಾರ ವೇದಿಕೆ ವಿಶ್ವಸ್ಥ, ತುಳು ಶಿವಳ್ಳಿ ಮಾಧ್ವ ಮಹಾಂಮಡಲದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಂಗಳೂರು ಡಿಡಿಪಿಐ ಕಚೇರಿಯಲ್ಲಿ ವಿಷಯ ಪರಿವೀಕ್ಷಣಾ ಅಧಿಕಾರಿಯಾಗಿದ್ದ ಐತಾಳರು, ಉಡುಪಿ  ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆಗೆ ಶ್ರಮಿಸಿದ್ದರು.

ವಯೋಸಹಜ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಕಡಿಯಾಳಿಯಲ್ಲಿರುವ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಮೃತರು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.