ಮಧ್ಯಪ್ರದೇಶ: ಮಧ್ಯಪ್ರದೇಶದ ಛತ್ತರ್ ಪುರ ಎಂಬಲ್ಲಿ ಮದುವೆ ಮೆರವಣಿಗೆ ಮುಗಿಸಿಕೊಂಡು ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಭೀಕರ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಮಹರಾಜ್ ಪುರದ ಪೊಲೀಸರು ಆಗಮಿಸಿ ಬಾವಿಯಲ್ಲಿ ಮೃತಪಟ್ಟಿದ್ದ ಆರು ಮಂದಿಯ ಮೃತದೇಹಗಳನ್ನು ಮೇಲೆತ್ತಿದ್ದಾರೆ. ಗಂಭೀರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.