ಕುಂದಾಪುರ: ಇಲ್ಲಿನ ಹಾಲಾಡಿ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕರೊಬ್ಬರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಎಂದು ಗುರುತಿಸಲಾಗಿದೆ.
ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ವಾಪಾಸ್ಸು ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ರಾಜೀವ ಶೆಟ್ಟಿ ಅವರು ವಿವಿಧ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ತಾಲೂಕು ಪಂಚಾಯತ್ ಸದಸ್ಯರಾಗಿ, ಕೆ.ಎಂ.ಎಫ್. ನಿರ್ದೇಶಕರಾಗಿ, ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕೆಎಂಎಫ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶಂಕರನಾರಾಯಣ ಭಾಗದ ಬಿಜೆಪಿಯ ಪ್ರಮುಖ ಮುಖಂಡರಾಗಿ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿದ್ದಾರೆ.
ಪತ್ನಿ ಜಿಪಂ ಮಾಜಿ ಉಪಾಧ್ಯಕ್ಷೆ ಮಮತಾ ಶೆಟ್ಟಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.