ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಇದು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಕಿಡಿಕಾರಿದ್ದಾರೆ.
ದೇಶದ ಉತ್ತಮ ಭವಿಷ್ಯಕ್ಕಾಗಿ, ನಾವು ಎಲ್ಲ ವರ್ಗದ ಜನರ ಹಕ್ಕುಗಳನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.