ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ವಿಧಾನಪರಿಷತ್ತಿನ ಸಭಾ ನಾಯಕರು, ಮೀನುಗಾರಿಕಾ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಅವಿಭಜಿತ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಮಾಡಿತು.
ನಿಯೋಗದಲ್ಲಿ ವಿಧಾನ ಸಭೆಯ ಮುಖ್ಯ ಸಚೇತಕರು ಆಗಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್, ಶಾಸಕರಾದ ರಾಜೇಶ್ ನಾಯ್ಕ್ ಬಂಟ್ವಾಳ, ರಘುಪತಿ ಭಟ್, ಉಮಾನಾಥ್ ಕೋಟ್ಯಾನ್ ಮೂಡುಬಿದಿರೆ, ಸಂಜೀವ ಮಠಂದೂರ್ ಪುತ್ತೂರು, ಭರತ್ ಶೆಟ್ಟಿ ಮಂಗಳೂರು ಉತ್ತರ, ವೇದವ್ಯಾಸ ಕಾಮತ್ ಮಂಗಳೂರು ದಕ್ಷಿಣ, ಹರೀಶ್ ಪೂಂಜಾ ಬೆಳ್ತಂಗಡಿ ಉಪಸ್ಥಿತರಿದ್ದರು.