ನವದೆಹಲಿ: ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಸಿಖ್ ಧರ್ಮಗುರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಸಿಂಘು ಗಡಿಯಲ್ಲೇ ನಡೆದಿದೆ.
ಸಂತ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾದ ಧರ್ಮಗುರು. ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಾಬಾ ರಾಮ್ ಸಿಂಗ್ ಬೆಂಬಲ ನೀಡಿದ್ದರು. ರೈತರ ಪ್ರತಿಭಟನಾ ಸ್ಥಳವಾದ ದೆಹಲಿಯ ಸಿಂಘು ಗಡಿಯಲ್ಲೇ ಗುಂಡು ಹಾರಿಸಿಕೊಂಡು ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿ, ‘ರೈತರ ಸಂಕಷ್ಟಗಳನ್ನು ನೋಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ರೈತರನ್ನು ಬೆಂಬಲಿಸಿ ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ಪ್ರಾಣತ್ಯಾಗ ಮಾಡಲು ನಿರ್ಧರಿಸಿದ್ದೇನೆ’ ಎಂದು ಬರೆಯಲಾಗಿರುವ ಪತ್ರವೊಂದು ದೊರಕಿದೆ.
ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯ್ದೆಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ರೈತರು ದೆಹಲಿ ಗಡಿಯಲ್ಲಿ ಮೂರು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.












