ಕುಂದಾಪುರ: ಇಲ್ಲಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಕಾರು ಮತ್ತು ಆಟೊರಿಕ್ಷಾ ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು ತ್ರಾಸಿಯಿಂದ ಮೊವಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾದ ಮಧ್ಯೆ ಢಿಕ್ಕಿ ಸಂಭವಿಸಿದೆ. ಇದರ ಪರಿಣಾಮ ರಿಕ್ಷಾ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು, ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಗೊಂಡವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.