2022ರ ಐಪಿಎಲ್ ಗೆ ಎರಡು ಹೊಸ ತಂಡ ಸೇರ್ಪಡೆ: ಬಿಸಿಸಿಐ

ಮುಂಬೈ: 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಗೆ ಎರಡು ಹೊಸ ತಂಡಗಳನ್ನು ಸೇರ್ಪಡೆಗೊಳಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರ ಕೈಗೊಂಡಿದೆ. ಆ ಮೂಲಕ ಐಪಿಎಲ್‌ನಲ್ಲಿ ಆಡುವ ತಂಡಗಳ ಸಂಖ್ಯೆಯ ಹತ್ತಕ್ಕೆ ಏರಿಕೆಯಾಗಿದೆ.

ಗುರುವಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಲಾಸ್‌ ಏಂಜಲೀಸ್‌ನಲ್ಲಿ 2028ರಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಬಿಡ್ ಸಲ್ಲಿಸಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಗೆ ಬೆಂಬಲ ನೀಡಲು ಕೂಡ ಈ ಸಂದರ್ಭದಲ್ಲಿ ತೀರ್ಮಾನಿಸಲಾಯಿತು.