ಕಾಪು: ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಪು ಬಿಜೆಪಿ ಯುವಮೋರ್ಚಾದ ವತಿಯಿಂದ ಕಟಪಾಡಿ ಕಾರುಣ್ಯ ವೃದ್ಧಾಶ್ರಮದ ಹಿರಿಯ ನಾಗರಿಕರಿಗೆ ಹಣ್ಣುಹಂಪಲು, ಆರ್ಥಿಕ ಧನಸಹಾಯ ವಿತರಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಕ್ಷೇತ್ರ ಪ್ರಭಾರಿಗಳಾದ ಯಶಪಾಲ್ ಸುವರ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಕಾಪು ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ರೈತ ಮೋರ್ಚಾ ಅಧ್ಯಕ್ಷ ಗುರು ನಂದನ್, ನೀತಾ ಪ್ರಭು.
ಕಾಪು ಯುವಮೋರ್ಚಾ ಪದಾಧಿಕಾರಿಗಳಾದ ಕಿಶನ್ ಅಲೆವೂರ್ ಪ್ರಸನ್ನ ಕಾಮತ್, ಅಭಿಜಿತ್ ಮಟ್ಟಾರು, ಸನತ್ ಮಣಿಪುರ, ಅರುಣ್ ಆಚಾರ್ಯ, ನಾಗರಾಜ್ ಆಚಾರ್ಯ, ಶ್ರೀಕಾಂತ್ ರವೀಂದ್ರ ಜೋಗಿ ಮೊದಲಾದವರು ಉಪಸ್ಥಿತರಿದ್ದರು.












