ಜ. 1ರಿಂದಲೇ ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ ಕಾಲೇಜು ಆರಂಭವಾಗಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದರು.
ಈ ಬಗ್ಗೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು. ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ ಎಂಬುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ.

ಜನವರಿ 1ರಿಂದಲೇ ನಿಗದಿಯಂತೆ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಶಾಲೆ ಆರಂಭಿಸುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಲಾ ಆರಂಭದ ಬಗ್ಗೆ ಈಗಾಗಲೇ ನಿರ್ಧಾರ ಮಾಡಲಾಗಿದೆ. ಅದರಂತೆಯೇ ಜನವರಿ 1ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ. ಆದರೂ ಮತ್ತೊಮ್ಮೆ ಚರ್ಚೆ ಮಾಡಲಾಗುತ್ತದೆ ಎಂದು ಸ್ಪಷ್ಟ ಪಡಿಸುವ ಮೂಲಕ, ಪೋಷಕರ ಗೊಂದಲಕ್ಕೆ ತೆರೆ ಎಳೆದಿದ್ದಾರೆ.