ಉಡುಪಿ: ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ.
ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರಕೋಷ್ಠದ ಸಂಚಾಲಕರು ಆಗಿರುವ ಸಂಸದ ಭಗವಂತ ಖೂಬಾ ಅವರು ನೇಮಕಗೊಳಿಸಿ ಆದೇಶ ನೀಡಿದ್ದಾರೆ.
ಸದಸ್ಯರನ್ನಾಗಿ ಮಾಡಲು ಸಹಕಾರ ನೀಡಿದ ಎಲ್ಲ ಬಿಜೆಪಿ ನಾಯಕರಿಗೆ ಅಂಡಾರು ದೇವಿಪ್ರಸಾದ್ ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.












