ಮಂಗಳೂರು: ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದ್ದು, ಮಂಗಳೂರು ನಗರದಾದ್ಯಂತ ಇಂದು (ಡಿ. 31) ಸಂಜೆ 6ಗಂಟೆಯಿಂದ ನಾಳೆ(ಜ.1) ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆ ನೆಪದಲ್ಲಿ ಐದು ಮಂದಿಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಸಾರ್ವಜನಿಕ ಸ್ಥಳ, ರಸ್ತೆ, ಬೀಚ್, ಮೈದಾನದಲ್ಲಿ ಸಂಭ್ರಮಾಚರಣೆ ನಿಷೇಧಿಸಲಾಗಿದೆ. ಕಾನೂನು ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.