ಉಡುಪಿ: ಅಯೋಧ್ಯೆ ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ಎಕ್ಸ್ ಶ್ರೇಣಿ ಪ್ಲಸ್ ಭದ್ರತೆ ಒದಗಿಸಿದೆ. ಈ ಭದ್ರತೆಯನ್ನು ಗುರುವಾರದಿಂದಲೇ ಶ್ರೀಗಳಿಗೆ ನೀಡಲಾಗಿದೆ.
ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.
ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ , ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.