ವಾಹನ ಡಿಕ್ಕಿ ಹೊಡೆದು ಮಹಿಳೆ ಮೃತ್ಯು

ಅರಂತೋಡು: ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಸುಳ್ಯದ ಅರಂತೋಡಿನಲ್ಲಿ ಇಂದು ಸಂಭವಿಸಿದೆ.

ಮೃತರನ್ನು ಬಿಳಿಯಾರಿನ ರಾಘವ ಎಂಬವರ ಪತ್ನಿ ಅಮ್ಮಣ್ಣಿ(48) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಅಮ್ಮಣ್ಣಿ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ವಾಹನವೊಂದು ಢಿಕ್ಕಿ ಹೊಡೆದಿದ್ದು, ಇದರಿಂದ ಅಮ್ಮಣ್ಣಿ ಗಂಭೀರವಾಗಿ ಗಾಯಗೊಂಡಿದ್ದರು. ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.