ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ: ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಸೋಮವಾರ ನೂತನ ಗ್ರಾಮ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದರು.

ಬಿಜೆಪಿಯವರು ಪಡಿತರ ಅಕ್ಕಿಯನ್ನು 7ರಿಂದ 5 ಕೆ.ಜಿಗೆ ಇಳಿಸಿದ್ದಾರೆ. ಆ ಮೂಲಕ ಬಡವರ ಹೊಟ್ಟೆಗೆ ಕಲ್ಲು ಹಾಕಿದ್ದಾರೆ. ಯಡಿಯೂರಪ್ಪ ಅವರಪ್ಪನ ಮನೆಯಿಂದ ಕೊಡುತ್ತಿದ್ದರಾ ಎಂದು ಪ್ರಶ್ನಿಸಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಗ್ರಾಪಂ ಚುನಾವಣೆಯ ಫಲಿತಾಂಶವೇ ಅದಕ್ಕೆ ಸೂಚನೆ ಎಂದರು.