ಮಂಗಳೂರು: ವಿವಾದಿತ ಮಾಂಸದ ಅಂಗಡಿಗಳಿಗೆ ಬೆಂಕಿ

ಮಂಗಳೂರು: ಮಾಂಸದ ಅಂಗಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ತೊಕ್ಕೊಟ್ಟು ಒಳಪೇಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿವೆ.

ಸ್ಥಳಕ್ಕೆ ಉಳ್ಳಾಲ ನಗರಸಭೆಯ ಅಧಿಕಾರಿಗಳು ಭೇಟಿ ನೀಡಿದ್ದು, ತಾತ್ಕಾಲಿಕ ಅಂಗಡಿ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ.

ಈ ಸ್ಟಾಲ್ ಗಳಲ್ಲಿ ಅಕ್ರಮ ಬೀಫ್ ಮಾರುತ್ತಿದ್ದಾರೆ. ಇವುಗಳನ್ನು ತೆರವು ಮಾಡಬೇಕೆಂದು ಆಗ್ರಹಿಸಿಉಳ್ಳಾಲದ ಬಜರಂಗದಳ- ವಿಹಿಂಪ ಕಾರ್ಯಕರ್ತರು ಪೊಲೀಸ್ ಇಲಾಖೆ ಮತ್ತು ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಮಾಡಿದ್ದರು.

ಇದೀಗ ರಾತ್ರೋರಾತ್ರಿ ಅಂಗಡಿಗಳಿಗೆ ಬೆಂಕಿ ಬಿದ್ದಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.