ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟ ಘಟನೆ ಧಾರವಾಡ ತಾಲ್ಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ನಸುಕಿನಲ್ಲಿ ಸಂಭವಿಸಿದೆ.
ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ವೇಳೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 10 ಮಹಿಳೆಯರು ಸೇರಿ ಒಟ್ಟು 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದಾಗಿ ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.