ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ಮೃತಪಟ್ಟ ದಾರುಣ ಘಟನೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಬಳಿಯಲ್ಲಿ ನಡೆದಿದೆ.
ಮಡಿಕೇರಿ ಅರಣ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕ ವೆಂಕಟೇಶ್, ಪತ್ನಿ ಬಬಿತಾ ಮತ್ತು ಮಗಳು ಪಲ್ಲವಿ ಕಾರಿನಲ್ಲಿ ಸುಂಟಿಕೊಪ್ಪದಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದರು.
ಈ ವೇಳೆ ಬಾಳೆಕಾಡು ಎಂಬಲ್ಲಿ ಕಾರು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ವೆಂಕಟೇಶ್ ಅವರು ಈಜಿಕೊಂಡು ದಡ ಸೇರಿದ್ದಾರೆ. ಆದರೆ, ಪತ್ನಿ ಬಬಿತಾ ಮತ್ತು ಮಗಳು ಪಲ್ಲವಿ ಕಾರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.