ಆಟೊ ರಿಕ್ಷಾ- ಮಿನಿ ಬಸ್ ಮಧ್ಯೆ ಡಿಕ್ಕಿ: ಆಟೊ ಚಾಲಕ ಮೃತ್ಯು

ಬೆಳ್ತಂಗಡಿ: ಆಟೊ ರಿಕ್ಷಾ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ಶಿರ್ತಾಡಿಯ ಆಟೊರಿಕ್ಷಾ ಹಾಗೂ ಮಿನಿಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ರಿಕ್ಷಾ ಚಾಲಕ ಎರಡು ವಾಹನಗಳ ನಡುವೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.