ಉಡುಪಿ: ಕೋವಿಡ್ ಲಸಿಕಾ ಅಭಿಯಾನಕ್ಕೆ ಉಡುಪಿ ಅಜ್ಜರಕಾಡಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಚಾಲನೆ ನೀಡಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರು ದೇಶವ್ಯಾಪಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿಯೇ ಜಿಲ್ಲೆಯಲ್ಲೂ ಲಸಿಕಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷ ಲಕ್ಷ್ಮೀ ಮಂಜುನಾಥ್ ಸಾಲಿಯಾನ್, ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಉಪಾಧ್ಯಕ್ಷ ಶರತ್ ಕುಮಾರ್ ಬೈಲಕೆರೆ, ಜಿಪಂ ಸಿಇಒ ಡಾ. ನವೀನ್ ಭಟ್, ಪ್ರಭಾರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಸಭೆ ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸರ್ಜನ್ ಡಾ. ಮಧುಸೂದನ್ ನಾಯಕ್, ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಲಸಿಕೆ ಉಸ್ತುವಾರಿ ಡಾ. ಎಂ.ಜಿ. ರಾಮ, ಅಧಿಕಾರಿ ಡಾ. ಪ್ರೇಮಾನಂದ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾಸ್ಪತ್ರೆಯಲ್ಲಿ ಎಲ್ ಇಡಿ ಪರದೆ ಅಳವಡಿಸಿ ಪ್ರಧಾನ ಮಂತ್ರಿಗಳ ನೇರ ಪ್ರಸಾರದ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.