ಕಾರ್ಕಳ: ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಬೆಳ್ಮಣ್ ಗ್ರಾಮದ ನೀಚಾಲು ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಉಚ್ಚಿಲ ತೆಂಕ ಎರ್ಮಾಳ್ ಮೂಲದ ಶ್ರೀಕಾಂತ್ (37) ಮೃತ ದುರ್ದೈವಿ. ಇವರು ಸ್ನೇಹಿತ ರವೀಂದ್ರ ಪೂಜಾರಿಯೊಂದಿಗೆ ಬೆಳ್ಮಣ್ ನಿಂದ ಸಾಂತೂರು ಕಡೆ ಹೋಗುತ್ತಿದ್ದರು. ಈ ವೇಳೆ ಪಡುಬಿದ್ರಿ ಕಡೆಯಿಂದ ಕಾರ್ಕಳ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.
ಇದರ ಪರಿಣಾಮ ಶ್ರೀಕಾಂತ್ ತಲೆಗೆ ಗಂಭೀರಗಾಯೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ನೇಹಿತ ರವೀಂದ್ರ ಪೂಜಾರಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.