ಮಂಗಳೂರು: ದೈವಸ್ಥಾನಗಳ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡೋಮ್ ಹಾಗೂ ಅವಹೇಳನಕಾರಿ ಬರಹ ಬರೆದು ಹಾಕಿರುವ ಘಟನೆ ಉಳ್ಳಾಲದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದಲ್ಲಿ ನಡೆದಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಇನ್ನಿತರ ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸಿ ಅವಹೇಳನಕಾರಿ ಬರಹಗಳನ್ನು ಬರೆದು ಹುಂಡಿಗೆ ಹಾಕಿದ್ದಾರೆ.
ಉಳ್ಳಾಲದ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಪ್ರತಿ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯಲಾಗುತ್ತದೆ. ಈ ಕಾಣಿಗೆ ಹಣ ತೆಗೆಯುವಾಗ ತಡವಾಗಿತ್ತು. ಮಂಗಳವಾರ ಸಂಜೆ ಕಾಣಿಕೆ ಡಬ್ಬಿ ತೆರೆದಿದ್ದು, ಆಗ ಡಬ್ಬಿಯೊಳಗೆ ಕಾಂಡೋಮ್‌ಗಳು ಹಾಗೂ ಪ್ರಚೋದನಕಾರಿ ಬರಹಗಳು ಇರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಕೊರಗಜ್ಜ ಸೇವಾ ಸಮಿತಿ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದೆ.