ಕೋಲ್ಕತ್ತ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಹೃದಯಾಘಾತದ ಸೌಮ್ಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಗಂಗೂಲಿ ಅವರು ಬಳಿಕ ಗುಣಮುಖರಾಗಿ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದೆ. ಸದ್ಯದ ಮಾಹಿತಿ ಪ್ರಕಾರ ಗಂಗೂಲಿ ಅವರು ಆರೋಗ್ಯವಾಗಿದ್ದಾರೆ. ಆದರೆ ಒಂದೆರಡು ದಿನ ಅವರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.