ಉಡುಪಿ: ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಕ ಶೈಕ್ಷಣಿಕ ಗುಣಮಟ್ಟದ ಬಲವರ್ಧನೆಗಾಗಿ ಫೋನ್ ಇನ್ ಕಾರ್ಯಕ್ರಮ ನಡೆಸುತ್ತಿದ್ದು, ಅದರಂತೆ ಕಾರ್ಕಳದ ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜನವರಿ 29ರಂದು ಸಂಜೆ 5ರಿಂದ ರಾತ್ರಿ 7 ಗಂಟೆಯವರೆಗೆ 10ನೇ ತರಗತಿಯ ಕನ್ನಡ ವಿಷಯಕ್ಕೆ ಸಂಬಂಧಿಸಿ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಕನ್ನಡ ವಿಷಯಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಪ್ರಶ್ನೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಹಾಗೆ, ಪಾಲಕರು, ಸಾರ್ವಜನಿಕರೂ ಸಹ ಪರೀಕ್ಷಾ ಸಿದ್ಧತೆ, ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಡಿಡಿಪಿಐ ಎಚ್. ನಾಗೂರ (94489 99353 ) ಅವರಿಗೆ ಕರೆ ಮಾಡಿ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.
ಕರೆ ಮಾಡಬೇಕಾದ ಮೊಬೈಲ್ ಸಂಖ್ಯೆ ನಿರ್ಮಲಾ ಮೊ.ಸಂ. 94485 48139 ಹಾಗೂ ಸುಪ್ರಿಯಾ ಮೊ.ಸಂ. 94810 14917, ಪವಿತ್ರಾ 91646 92781, ಸುಬ್ರಹ್ಮಣ್ಯ ಭಟ್ 94826 54861.