ವಿಜಯಪುರ: ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಎರಡು ಬಾರಿ ಶಾಸಕರಾಗಿದ್ದ ಅವರು, ಎರಡು ಬಾರಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ.
ಸಿಂದಗಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಅವರು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ಸಿಂದಗಿ ಕ್ಷೇತ್ರದಿಂದ ಜನತಾದಳದ ಶಾಸಕರಾಗಿ ಆಯ್ಕೆಯಾಗಿದ್ದರು. ಆಗಲೂ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.