ಬೆಂಗಳೂರು: ವಿಧಾನ ಪರಿಷತ್ ಕಲಾಪ ನಡೆಯುವ ವೇಳೆ ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ರಾಥೋಡ್ ತಮ್ಮ ಮೊಬೈಲ್ ನಲ್ಲಿ ನೀಲಿಚಿತ್ರ ವೀಕ್ಷಣೆ ಮಾಡುತ್ತಿದ್ದರು ಎಂದು ಕನ್ನಡದ ಖಾಸಗಿ ಸುದ್ದಿವಾಹಿನಿ ವರದಿ ಬಿತ್ತರಿಸಿದೆ.
ಇಂದು ವಿಧಾನಪರಿಷತ್ ಕಲಾಪ ನಡೆಯುತ್ತಿತ್ತು.ಎಂಎಲ್ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಡೀ ರಾಜ್ಯವನ್ನು ಪ್ರತಿನಿಧಿಸುವ ಶಾಸಕರುಗಳು ಕೂರುವ ಪ್ರಜಾ ದೇಗುಲದಲ್ಲಿ ಇಂತಹ ಅಸಹ್ಯ ವರ್ತನೆ ತೋರಿದ ಎಂಎಲ್ ಸಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.
ಪ್ರಕಾಶ್ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಆಯ್ಕೆಯಾದ ಎಂಎಲ್ ಸಿ. ಕೆಪಿಸಿಸಿ ವಕ್ತಾರರಾಗಿದ್ದು, ಎಐಸಿಸಿಯ ಗೋವಾ ವೀಕ್ಷಕರಾಗಿಯೂ ನೇಮಕಗೊಂಡಿದ್ದಾರೆ. ಇವರು ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ.