ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಕಾರು ಅಪಘಾತ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಕಾರು ಶನಿವಾರ ಬೆಳಗಿನ ಜಾವ ನಂತೂರು ಬಳಿ ಅಪಘಾತಗೊಂಡಿದ್ದು, ಅಪಘಾತದಲ್ಲಿ ದಯಾನಂದ ಅವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಮುಂಜಾನೆ 5:15ರ ಸುಮಾರಿಗೆ ಕತ್ತಲ್ ಸಾರ್ ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದು, ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿ ಮತ್ತು ಇವರ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಈ ವೇಳೆ ಕತ್ತಲ್ ಸಾರ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.