ಶಿರ್ವ ಸಂತ ಮೇರಿ ಕಾಲೇಜು: ಫೆ. 11ಕ್ಕೆ ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ

ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಫೆಬ್ರವರಿ 11ರಂದು ಮಂಗಳೂರಿನ ಪ್ರತಿಷ್ಟಿತ ದಿಯಾ ಸಿಸ್ಟಮ್ ಸಂಸ್ಥೆ (ಗ್ಲೋ ಟಚ್ ಟೆಕ್ನಾಲಾಜಿಸ್)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲಿದೆ.

ಈಗಾಗಲೇ ಬಿ.ಸಿ.ಎ. (ಸಿ.ಎಸ್.), ಬಿ.ಎಸ್.ಸಿ (ಸಿ.ಎಸ್.), ಬಿ.ಇ. (ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಡಿಪ್ಲೊಮಾ (ಸಿಎಸ್), ಎಂ.ಎಸ್.ಸಿ, ಎಂ.ಸಿ.ಎ. ಸ್ನಾತಕೋತ್ತರ ಪದವಿ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಅಂದು ಬೆಳಿಗ್ಗೆ 9.30ರಿಂದ ಕಾಲೇಜಿನ ಫಾ. ಹೆನ್ರಿ ಕ್ಯಾಸ್ತಲಿನೊ ಆಡಿಟೋರಿಯಂನಲ್ಲಿ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೂಲ ಅಂಕಪಟ್ಟಿ, ಪದವಿ ಪ್ರಮಾಣ ಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ 79752 30201 ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.