ಮಂಗಳೂರು: ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಬಗ್ಗೆ ಮತ್ತು ಬಿಲ್ಲವ ಸಮಾಜದ ಕುರಿತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಜಗದೀಶ್ ಅಧಿಕಾರಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಗದೀಶ್ ಅಧಿಕಾರಿ ನಮ್ಮ ಗರಡಿಗೆ ಬಂದು ತಪ್ಪು ಕಾಣಿಕೆ ಹಾಕಿ ಸಮಾಜದ ಮುಂದೆ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅಧಿಕಾರಿ ವಿರುದ್ಧ ನಾವು ತಾಂಟಲು ಸಿದ್ದರಿದ್ದೇವೆ ಎಂದು ಕುಳಾಯಿ ಎಚ್ಚರಿಕೆ ನೀಡಿದ್ದಾರೆ.












