ಬ್ರಹ್ಮಾವರ: ಬ್ರಹ್ಮಾವರದ ಮಧುವನ್ ಕಾಂಪ್ಲೆಕ್ಸ್ ನಲ್ಲಿರುವ ಫಾರ್ಚೂನ್ ಇನ್ ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ ಸಂಸ್ಥೆಯಲ್ಲಿ ವಿವಿಧ ವೃತ್ತಿಪರ ಕೋರ್ಸ್ ಗಳ ಉದ್ಘಾಟನಾ ಸಮಾರಂಭ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರ ಕ್ಷೇಮಧಾಮ ಮತ್ತು ಆಯುಷ್ ಧಾಮದ ವ್ಯವಸ್ಥಾಪಕ ನಿರ್ದೇಶಕ ವಿನಯಚಂದ್ರ ಶೆಟ್ಟಿ ಅವರು, ವೈದ್ಯಕೀಯ ಮತ್ತು ಅರೆವೈದ್ಯಕೀಯ ಕಾರ್ಯಪಡೆಯ ಮಹತ್ವವನ್ನು ವಿವರಿಸಿದರು.
ಕಾಲೇಜಿನ ಅಧ್ಯಕ್ಷ ಡಾ. ದಿವಿಕ್ ಶೆಟ್ಟಿ ಮಾತನಾಡಿ, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವೃತ್ತಿಪರ ಕೋರ್ಸ್ ಗಳ ಪ್ರಾಮುಖ್ಯತೆಯನ್ನು ತಿಳಿಸಿದರು. ವ್ಯವಸ್ಥಾಪಕ ಟ್ರಸ್ಟಿ ತಾರನಾಥ್ ಶೆಟ್ಟಿ ಉಪಸ್ಥಿತರಿದ್ದರು.
ಸಂಸ್ಥೆಯು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ಅಂಗೀಕರಿಸಿದ ಕೋರ್ಸ್‌ಗಳನ್ನು ನಡೆಸುತ್ತಿದೆ.
ಬಿಎಸ್ಸಿ ನರ್ಸಿಂಗ್, ಬಿಎಚ್ ಎ, ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ, ಡಿಪ್ಲೋಮಾ ಇನ್ ಎಕ್ಸೆರಾ ಟೆಕ್ನಾಲಜಿ, ಡಿಪ್ಲೊಮಾ ಇನ್ ಒಟಿ ಟೆಕ್ನಾಲಜಿ ಕೋರ್ಸ್ ಗಳು ಆರಂಭಗೊಂಡಿದೆ.