ಡಿವೈಡರ್ ಗೆ ಬೈಕ್ ಡಿಕ್ಕಿ‌: ಬಾಲಕ ಸ್ಥಳದಲ್ಲೇ ಮೃತ್ಯು

ಶಿರೂರು: ಡಿವೈಡರ್ ಗೆ ಬೈಕ್ ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಅಳ್ವೆಗದ್ದೆ ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಹಡವಿನಕೋಣೆ ನಿವಾಸಿ ಅರಾತ್ (15) ಮೃತ ದುರ್ದೈವಿ. ಈತ ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಹೋಗಿದ್ದು, ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬಡಿದಿದ್ದಾನೆ. ಇದರ ಪರಿಣಾಮ ಈತ ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ತೀವ್ರಗಾಯಗೊಂಡಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಅಲ್ಲದೆ, ಈತ ಅಪ್ರಾಪ್ತನಾಗಿದ್ದು, ಯಾವುದೇ ಚಾಲನಾ ಪರವಾನಗಿ ಹೊಂದಿಲ್ಲ. ಶಿರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.