ಕಾರ್ಕಳ: ನಿಟ್ಟೆ ಡಾ. ಎನ್. ಎಸ್. ಎ. ಎಮ್ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2020-21ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಗಣಪತಿ ಆಚಾರ್ಯ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಕುಮಾರಿ ಬಿ. ಕೆ ಅಧ್ಯಕ್ಷತೆ ವಹಿಸಿದ್ದರು.
ರಾಷ್ತ್ರೀಯ ಸೇವಾ ಯೋಜನಾಧಿಕಾರಿ ಭರತ್ ಎಸ್ ಭಟ್ ಸ್ವಾಗತಿಸಿದರು. ಅನುಷಾ ಆಚಾರ್ಯ ವಂದಿಸಿದರು. ಕಾಲೇಜಿನ ಉಪನ್ಯಾಸಕ ಸಚಿನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.