ಉಡುಪಿ: ರಕ್ತಕ್ಕೆ ಯಾವುದೇ ಜಾತಿ ಇಲ್ಲ, ಅದು ಜೀವ ಉಳಿಸುವ ಅಮೃತ ಎಂದು ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯ ವೈದ್ಯಾಧಿಕಾರಿ ಡಾ| ವೀಣಾ ಹೇಳಿದರು.
ನಿಟ್ಟೆ ಡಾ. ಎನ್ಎಸ್ಎಎಂ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯೂತ್ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಲಯನ್ಸ್ ಕ್ಲಬ್ ಬೆಳ್ಮಣ್, ಲಯನ್ಸ್, ಲಿಯೊ, ಲಯನ್ಸ್ ಕ್ಲಬ್ ಹರ್ಷ ಹಿರಿಯಡ್ಕ, ನಿಟ್ಟೆ ಗಾಜ್ರಿಯಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಕ್ತನಿಧಿ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ ಬ್ರೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಲಯನ್ಸ್ ಕ್ಲಬ್ ಬೆಳ್ಮಣ್ ನ ಅಧ್ಯಕ್ಷ ಲಯನ್ ಗ್ರೇಗೋರಿ ಮೆನೆಜಸ್ ಮಾತನಾಡಿದರು. ಲಯನ್ಸ್ ಕ್ಲಬ್ ಹಿರಿಯಡದ ಅಧ್ಯಕ್ಷ ಲಯನ್ ರವೀಂದ್ರನಾಥ ಹೆಗ್ಡೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ನಿಟ್ಟೆ ಗಾಜ್ರಿಯಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರತಿನಿಧಿ ಸುರೇಶ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಕುಮಾರಿ ಬಿ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಎನ್ಎಸ್ಎಸ್ ಘಟಕಗಳ ಯೋಜನಾಧಿಕಾರಿ ಭರತ್ ಭಟ್ ಸ್ವಾಗತಿಸಿದರು. ಯೂತ್ ರೆಡ್ ಕ್ರಾಸ್ ಘಟಕದ ನಿರ್ದೇಶಕಿ ರಶ್ಮಿ ವಂದಿಸಿದರು. ಕಾಲೇಜಿನ ಅಧ್ಯಾಪಕ ಸಚ್ಚಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.