ಬ್ರಹ್ಮಾವರ: ಕಾಡೂರು-ನಡೂರು ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಮಾನ ಮತಗಳು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಚೀಟಿ ಎತ್ತುವ ಮೂಲಕ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಪಾಂಡುರಂಗ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಪಕ್ಷೇತರ ಸದಸ್ಯೆ ಅಮಿತಾ ರಾಜೇಶ್ ಆಯ್ಕೆಯಾದರು. ಇವರಿಬ್ಬರೂ ನಡೂರು ಎರಡನೇ ವಾರ್ಡಿನ ಸದಸ್ಯರಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಪಾಂಡುರಂಗ ಶೆಟ್ಟಿ ಮತ್ತು ರಘುರಾಮ ಶೆಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಮಿತಾ ಮತ್ತು ಪ್ರಭಾವತಿ ನಾಮಪತ್ರ ಸಲ್ಲಿಸಿದ್ದರು.