ಉಡುಪಿ: ಹೃದಯಾಘಾತದಿಂದ ಶ್ರೀಲಂಕಾದ ಪ್ರಜೆ ಮೃತ್ಯು

ಉಡುಪಿ: ಉಡುಪಿ ಜಿಲ್ಲೆಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ಶ್ರೀಲಂಕಾದ ಪ್ರಜೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮೃತ ವ್ಯಕ್ತಿಯನ್ನು ಶ್ರೀಲಂಕಾ ದೇಶದ ನಿವಾಸಿ ಕಬಿಲನ್ (59) ಎಂದು ಗುರುತಿಸಲಾಗಿದೆ. ಇವರು ಮೀನು ರಪ್ತು ಕೆಲಸ ಮಾಡಿಕೊಂಡಿದ್ದು, 2020ರ ನವೆಂಬರ್ ತಿಂಗಳಿನಲ್ಲಿ ಉಡುಪಿಗೆ ಬಂದಿದ್ದರು. ಖಾಸಗಿ ಲಾಡ್ಜ್ ವೊಂದರಲ್ಲಿ ತಂಗಿದ್ದ ಇವರಿಗೆ ಫೆ.16ರಂದು ರಾತ್ರಿ ದಿಢೀರ್ ಆಗಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.

ಕೂಡಲೇ ತನ್ನ ಪರಿಚಯಸ್ಥರಾದ ಹರ್ಷವರ್ಧನ್ ಕೆ. ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅವರು ಕೂಡಲೇ ತನ್ನ ಸ್ನೇಹಿತನೊಂದಿಗೆ ಆಗಮಿಸಿ ಕಬಿಲನ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಕಬಿಲನ್ ಫೆ.17 ರಂದು ಹೃದಯಾಘಾದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.