ಕಾಪು: ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಕಾಪು: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ‌ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕಾಪು ತಾಲೂಕಿನ ಮಲ್ಲಾರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಯು. ಶಾಬುದ್ದೀನ್ ಸಾಹೇಬ್ ಮೃತ ದುರ್ದೈವಿ. ಇವರು ಫೆ.17ರಂದು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.

ಘಟನೆಯಿಂದ ತೀವ್ರಗಾಯಗೊಂಡಿದ್ದ ಶಾಬುದ್ದೀನ್ ಸಾಹೇಬ್‍ ಅವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟೊತ್ತಿಗೆ ಅವರು ಮೃತಪಟ್ಟಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.