ಕುಂದಾಪುರ: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಕೊಟೇಶ್ವರ ಗ್ರಾಮದ ಕೊಟೇಶ್ವರ- ಹಾಲಾಡಿ ರಸ್ತೆಯ ಪ್ರೀತಮ್ ಬಾರ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಇವರು ಕೋಣಿ-ಕಟ್ಗೇರಿ ಕಡೆಯಿಂದ ಕೊಟೇಶ್ವರ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಕೊಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ರಸ್ತೆಯ ಬಲಬದಿಗೆ ಬಂದು ಪ್ರವೀಣ್ ಅವರ ಬೈಕ್ ಗೆ ಎದುರಿನಿಂದ ಡಿಕ್ಕಿ ಹೊಡೆದಿದ್ದಾನೆ.
ಇದರಿಂದ ಪ್ರವೀಣ್ ತಲೆಗೆ ಗಂಭೀರ ರಕ್ತಗಾಯವಾಗಿ ಪ್ರಜ್ಞೆ ಕಳೆದುಕೊಂಡಿದ್ದರು. ಕೂಡಲೇ ಅವರನ್ನು ಕೊಟೇಶ್ವರ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಪ್ರವೀಣ್ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












