ಉಡುಪಿ :ಎನ್.ಪಿ.ಸಿ.ಡಿ.ಸಿ.ಎಸ್ ಹಾಗೂ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಫೆ. 25 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ರ ವರೆಗೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯಲಿದೆ.ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.