ಕಾರ್ಕಳ: ಕಾರ್ಕಳ ತಾಲೂಕು ಪಂಚಾಯತ್‌ನ ನೂತನ ಕಟ್ಟಡಕ್ಕೆ ಶಾಸಕ ವಿ. ಸುನಿಲ್ ಕುಮಾರ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ₹ 1.64 ಕೋಟಿ ವೆಚ್ಚದಲ್ಲಿ ತಾಲೂಕು ಪಂಚಾಯತ್‌ನ ನೂತನ ಕಟ್ಟಡ ನಿರ್ಮಾಣವಾಗಲಿದೆ. ಒಂದು ವರ್ಷದಲ್ಲಿ ಕಾಮಗಾರಿ ಮುಗಿಸುವ ಆಶಯ ಹೊಂದಲಾಗಿದೆ ಎಂದರು.
ಸ್ವಚ್ಛ ಕಾರ್ಕಳ ಸ್ವರ್ಣ ಕಾರ್ಕಳ ಪರಿಕಲ್ಪನೆಯಡಿ ಕಾರ್ಕಳದ ಬಹುತೇಕ ಎಲ್ಲ ಸರಕಾರಿ ಕಚೇರಿಗಳನ್ನು ಪುನಶ್ಚೇತನದೊಂದಿಗೆ ಆಧುನೀಕರಣ ಗೊಳಿಸಲಾಗಿದೆ. ಇದರಿಂದ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ವೇಗ ದೊರೆಯಲಿದೆ ಎಂದರು.
ತಾ.ಪಂ. ಅಧ್ಯಕ್ಷೆ ಸೌಭಾಗ್ಯ ಮಡಿವಾಳ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಉದಯ ಕುಮಾರ್ ಕೋಟ್ಯಾನ್, ಹೆಬ್ರಿ ತಾಪಂ ಅಧ್ಯಕ್ಷ ರಮೇಶ್ ಪೂಜಾರಿ, ಜಿಪಂ ಸದಸ್ಯರಾದ ಸುಮಿತ್ ಶೆಟ್ಟಿ ಕೌಡೂರು, ರೇಶ್ಮಾ ಉದಯ ಶೆಟ್ಟಿ, ಜ್ಯೋತಿ ಹರೀಶ್, ಕುಕ್ಕುಂದೂರು ಗ್ರಾಪಂ ಅಧ್ಯಕ್ಷೆ ಶಶಿಮಣಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್. ಉಪಸ್ಥಿತರಿದ್ದರು.