ತಮಿಳುನಾಡು: ಚುನಾವಣೆಗೆ ಮೊದಲೇ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಶಶಿಕಲಾ ನಟರಾಜನ್

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಮೊದಲೇ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ನಾನು ಯಾವತ್ತೂ ಯಾವುದೇ ಹುದ್ದೆಯನ್ನು ಬಯಸಿಲ್ಲ. ತಮಿಳುನಾಡಿನ ಜನರಿಗೆ ನಾನು ಕೃತಜ್ಞಳಾಗಿದ್ದೇನೆ. ರಾಜಕೀಯದಿಂದ ದೂರ ಸರಿಯುತ್ತೇನೆ. ಅಮ್ಮನ ಸರ್ಕಾರವನ್ನು ತಮಿಳುನಾಡಿನಲ್ಲಿ ಸ್ಥಾಪಿಸಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಹೇಳುವ ಮೂಲಕ ಶಶಿಕಲಾ ರಾಜಕೀಯದಿಂದ ದೂರ ಸರಿದಿದ್ದಾರೆ.

ಅಣ್ಣಾಡಿಎಂಕೆ ಪಕ್ಷದಿಂದ ಶಶಿಕಲಾ ಅವರನ್ನು ಉಚ್ಚಾಟಿಸಿರುವ ಪಳನಿಸ್ವಾಮಿ, ಪಕ್ಷದ ಬಾಗಿಲು ಮುಚ್ಚಿದ್ದರು. ಹೀಗಾಗಿ, ಬೇರೆ ದಾರಿ ಕಾಣದೆ ಶಶಿಕಲಾ ರಾಜಕೀಯ ಸನ್ಯಾಸದ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.