ಉಡುಪಿ: ನಾಗರಿಕ ಸಮಿತಿ ಕಾರ್ಯಕರ್ತರ ಸಮಯಪ್ರಜ್ಞೆಯಿಂದ ಬದುಕುಳಿದ ಬಿಳಿ ಗೂಬೆ

ಉಡುಪಿ: ಅಸ್ವಸ್ಥಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಅವನತಿಯ ಅಂಚಿನಲ್ಲಿರುವ ಬಿಳಿ ಪ್ರಬೇಧದ ಗೂಬೆಯನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

ಉಪವಲಯ ಅರಣ್ಯಾಧಿಕಾರಿ ಗುರುರಾಜ್ ಕಾವ್ರಾಡಿ, ಅರಣ್ಯವಿಕ್ಷಕ ಪರಶುರಾಮ ಮೇಟಿ ಅವರ ವಶಕ್ಕೆ ನೀಡಿದ್ದಾರೆ. ಗೂಬೆ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಬಳಿಕ ಸುರಕ್ಷಿತ ಅರಣ್ಯಪ್ರದೇಶಕ್ಕೆ ಬಿಡುವುದಾಗಿ ಉಪವಲಯ ಅರಣ್ಯಾಧಿಕಾರಿಗಳು ಹೇಳಿದ್ದಾರೆ.

ಬಿಳಿ ಗೂಬೆಯು ಅಂಬಲಪಾಡಿ ಸಿಡ್ನಿ ಮೆಂಡೊನ್ಸಾ ಅವರ ಮನೆಯಲ್ಲಿ ಪತ್ತೆಯಾಗಿತ್ತು. ನಾಯಿ- ಬೆಕ್ಕುಗಳಿಗೆ ಸುಲಭವಾಗಿ ಆಹಾರವಾಗುತ್ತಿದ್ದ ಗೂಬೆಯು ಸಮಿತಿಯ ಕಾರ್ಯಕರ್ತರ ಸಮಯಪ್ರಜ್ಞೆಯಿಂದ ಬದುಕುಳಿದಿದೆ.