ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ

ಕೋಲ್ಕತ್ತ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಭಾನುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರ್‍ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಭಾಗವಹಿಸಲಿದ್ದಾರೆ. ಕೋಲ್ಕತ್ತದ ಮೈದಾನ್ ಪ್ರದೇಶದ ಬ್ರಿಗೇಡ್ ಪರೇಡ್ ಗ್ರೌಂಡ್ಸ್‌ನಲ್ಲಿ ಮೋದಿ ರ‍್ಯಾಲಿ ನಡೆಯಲಿದ್ದು, 10 ಲಕ್ಷ ಜನ ಸೇರಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ತಿಳಿಸಿದ್ದಾರೆ.