ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋ ಸಿಡಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್ ಸಿಕ್ಕಿದೆ.
ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ದೂರುದಾರ ದಿನೇಶ್ ಕಲ್ಲಹಳ್ಳಿ ಹಿಂಪಡೆದಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಇನ್‌ಸ್ಪೆಕ್ಟರ್ ಅವರಿಗೆ ಪತ್ರ ಬರೆದಿರುವ ಅವರು, ‘ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿದ್ದ ಲೈಂಗಿಕ ದೌರ್ಜನ್ಯ ದೂರನ್ನು ಹಿಂಪಡೆಯುತ್ತಿದ್ದೇನೆ’ ಎಂದಿದ್ದಾರೆ.