ಬೈಂದೂರು: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 6ರಂದು ಸಂಜೆ ನಡೆದಿದೆ.
ಮೃತರನ್ನು ಶ್ವೇತಾ(17) ಎಂದು ಗುರುತಿಸಲಾಗಿದೆ. ಈಕೆ ಉಪ್ಪುಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಶ್ವೇತಾ ಕಲಿಕೆಯಲ್ಲಿ ಹಿಂದುಳಿದಿದ್ದಳು. ಇದೇ ಖಿನ್ನತೆಯಲ್ಲಿದ್ದ ಈಕೆ ಮಾ. 6ರಂದು ಕಾಲೇಜಿಗೆ ಹೋಗಿ ಮಧ್ಯಾಹ್ನ ವಾಪಸ್ ಮನೆಗೆ ಬಂದಿದ್ದಳು.
ತಾಯಿ ಹಾಲು ತರಲೆಂದು ಹೋದಾಗ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.