ಉಡುಪಿ: ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ವಡ್ಡಾರು ಅವರ ಉಡುಪಿಯ ಪುತ್ತೂರು ಬಳಿಯ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಮನೆಯನ್ನು ಜಾಲಾಡಿದ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸದ್ಯ ಸುಬ್ರಹ್ಮಣ್ಯ ವಡ್ಡಾರು ಅವರು ಉಡುಪಿಯಿಂದ ವರ್ಗಾವಣೆಗೊಂಡು ಮ್ಯೆಸೂರಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮ್ಯೆಸೂರಿನಲ್ಲಿ ಮನೆ, ಕಚೇರಿ, ಕಾರವಾರದಲ್ಲಿರುವ ಮನೆ, ಸಹಿತ ಅವರ ನಿವೇಶನ ಹೊಂದಿದ್ದಾರೆ ಎನ್ನಲಾದ ಒಟ್ಟು ನಾಲ್ಕು ಕಡೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.












